ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇರುವಂತ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳಿಗೆ ( Teacher Recruitment ) ತಾತ್ಕಾಲಿಕವಾಗಿ 9,499 ಅತಿಥಿ ಶಿಕ್ಷಕರ ನೇಮಕಾತಿಗೆ ( Guest Teacher Recruitment ) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ ಎಂದಿದೆ.
ಅದರಂತೆ 2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಉಲ್ಲೇಖ (3) ಮತ್ತು (4) ರಲ್ಲಿರುವಂತೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ. ಸದರಿ ಅತಿಥಿ ಶಿಕ್ಷಕರನ್ನು ದಿನಾಂಕ:01.06.2025 ರಿಂದ ನೇಮಕಾತಿ ಮಾಡಿಕೊಳ್ಳಲು ತಿಳಿಸಿದೆ.
ಪರತ್ತುಗಳು:-
1. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
2. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
3. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
4. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದ. ನಂತರ ಇತರ ವಿಷಯಗಳಿಗೆ ಆದ್ಯತೆ ನೀಡುವುದು.
5. ಸದರಿ ವಿಷಯಗಳಿಗೆ ಹಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
6. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಅದೇ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.
7. ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
8. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿದ ಕನಿಷ್ಕ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡತಕ್ಕದ್ದು.
9. ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.
10. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರವನ್ನು ಉಲ್ಲೇಖ(2) ರ ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಿರುವ ಮಾಹೆಯಾನ ರೂ.12500/- ಆಗಿರುತ್ತದೆ, ಈ ಗೌರವ ಧನ ಪಾವತಿಯನ್ನು ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಪಾವತಿಸುವುದು.
11. ದಿನಾಂಕ:28.04.2025 ರಂದು ವರ್ಗಾವಣೆ ತಂತ್ರಾಂಶದಲ್ಲಿ ಇರುವ ಒಟ್ಟು 9499 ಖಾಲಿ ಹುದ್ದೆಗಳ ಅನುಸಾರ ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿವರಗಳನ್ನು ಈ ಕಛೇರಿಗೆ ಸಲ್ಲಿಸಿದ ನಂತರ ತಾಲ್ಲೂಕಿನಿಂದ ತಾಲ್ಲೂಕಿಗೆ ಅತಿಥಿ ಶಿಕ್ಷಕರ ಮರುಹಂಚಿಕೆ ಮಾಡುವಂತಿಲ್ಲ,
12. ನಿಯೋಜನೆ ಮೇಲೆ ತೆರವಾದ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
13, ಇನ್ನೂ ಹೆಚ್ಚಿನ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಅವಶ್ಯಕತೆ ಇದ್ದಲ್ಲಿ ಮಾಹಿತಿಯನ್ನು ಉಪನಿರ್ದೇಶಕರು(ಆಡಳಿತ) ರವರ ಮೂಲಕ ಮಾಹಿತಿಯನ್ನು ಸಲ್ಲಿಸುವುದು.
ಈ ಮೇಲಿನ ಎಲ್ಲಾ ಅಂಶಗಳನ್ನು ಎಲ್ಲಾ ಅಂಶಗಳನ್ನು ಪರಿಗಣಿಸಿ, ಇಲಾಖೆಯ ಪರಿಗಣಿಸಿ, ಇಲಾಖೆಯ ನಿಯಮಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಉಲ್ಲೇಖ (1) ರಲ್ಲಿ ಒಟ್ಟು 11000 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಸಹಮತಿಯಂತೆ ಉಲ್ಲೇಖ (3) ಮತ್ತು (4) ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳನ್ನೊಳಗೊಂಡಂತೆ 2025-26 ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪುಸ್ತುತ ಖಾಲಿ ಇರುವ ಒಟ್ಟು 9499 ಹುದ್ದೆಗಳಿಗೆ ಜಿಲ್ಲಾವಾರು/ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಅನುಮತಿ ನೀಡಿದೆ.
ಮೇಲ್ಕಂಡ ವಿಷಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮವಹಿಸಲು ತಿಳಿಸಿದ, ತಪ್ಪಿದಲ್ಲಿ ಸಂಬಂಧಿಸಿದ ಉಪನಿರ್ದೇಶಕರು(ಆಡಳಿತ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ತಾಲ್ಲೂಕು ಪಂಚಾಯಿತಿವಾರು ಹುದ್ದೆಗಳ ವಿವರಗಳನ್ನು ಕೆಳಗಿನ ನಮೂನೆಯಲ್ಲಿ ಕ್ರೋಢೀಕೃತ ದೃಢೀಕೃತ (ಪಿ.ಡಿ.ಎಫ್ ಮಾದರಿಯಲ್ಲಿ) ಸ್ಕ್ಯಾನ್ ಪ್ರತಿಯನ್ನು ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ಇ-ಮೇಲ್ ವಿಳಾಸ est4cpibng@gmail.com ಮುಖಾಂತರ ದಿ.20.06.2025ರೊಳಗೆ ಈ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸುವುದು. ಇದನ್ನು ಆದ್ಯತೆ ಮೇರೆಗೆ ಪರಿಗಣಿಸಿ ವಿಳಂಬಕ್ಕೆ ಅವಕಾಶ ನೀಡದಂತೆ ತುರ್ತು ಕ್ರಮ ಜರುಗಿಸಲು ತಿಳಿಸಿದೆ. ತಪ್ಪಿದ್ದಲ್ಲಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.