ಬೆಂಗಳೂರು: ರಾಜ್ಯ ಸರ್ಕಾರವು ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾದ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಹೂಸದಾಗಿ ನೇರ ನೇಮಕಾತಿಯನ್ನು ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿರುತ್ತದೆ ಎಂದಿದ್ದಾರೆ.
ಪ್ರಸ್ತುತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ಆಯೋಗವು ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟವು ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಅಂಗಿಕರಿಸಿದ್ದು, ಸರ್ಕಾರದಿಂದ ಈ ಕೆಳಕಂಡ ಆದೇಶ/ ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ.
1. ದಿನಾಂಕ 25.08.2025 ರ ಸರ್ಕಾರದ ಆದೇಶ ಸಂಖ್ಯೆ: ಸಕಇ 8 ಎಸ್‌ಎಲ್‌ಪಿ 2024.
2. ದಿನಾಂಕ: 03.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 02 ಸಹಿಮ 2025.
3. ದಿನಾಂಕ:06.09.2025ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 03 ಸೆಹಿಮ 2025
4. ದಿನಾಂಕ: 06.09.2025 ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 249 ಸೆನೆನಿ 2025.
5. ದಿನಾಂಕ 06.09.2025 ರ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 388 ಸೆನನಿ 2024.
ಮೇಲ್ಕಂಡ ಆದೇಶ/ ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಎಲ್ಲಾ ಇಲಾಖೆ/ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದ್ದಾರೆ.
ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!