ಬೆಂಗಳೂರು: ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ 300 ಸಿಬ್ಬಂದಿಗಳ ನೇಮಕಕ್ಕೆ ಶೀಘ್ರ ಕ್ರಮಕೈಗೊಂಡು ಆರು ತಿಂಗಳೊಳಗೆ ಪೂರ್ವ ಪ್ರಮಾಣದಲ್ಲಿ ಭರ್ತಿ ಮಾಡಲಾಗುವುದು ಎಂದು ಆಹಾರ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಒಟ್ಟು 500 ಹುದ್ದೆಗಳಲ್ಲಿ 200 ಜನರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ 300 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ಕೆಪಿಎಸ್ಸಿ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ಪಡೆದು ಮೂರು ತಿಂಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಆರು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳುವುದರ ಜೊತೆಗೆ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಯಮಾನುಸಾರ ಬಡ್ತಿ ನೀಡಲಾಗುವುದು ಎಂದರು.
6 ತಿಂಗಳ ಬಳಿಕ ‘IAS ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಗೆಜೆಟಿಯರ್ ಸಂಪಾದಕಿ ಹುದ್ದೆ
BIG NEWS: ಕ್ರಿಮಿನಲ್ ಅಪರಾಧಗಳ ಪ್ರಕಣಗಳಲ್ಲಿ ನಡೆಯುವ ‘ನ್ಯೂಸ್ ರೂಂ ಕೋರ್ಟ್’ಗೆ ಸುಪ್ರೀಂ ಕೋರ್ಟ್ ಬ್ರೇಕ್