ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ. ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು.
ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೆ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
ಏಪ್ರಿಲ್ 16ಕ್ಕೆ ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ
‘SC ಒಳ ಮೀಸಲಾತಿ’ ಜಾರಿಗೊಳಿಸಿದ ತೆಲಂಗಾಣ: ದೇಶದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರ | SC categorisation