ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ತಿಳಿಸಿದ್ದಾರೆ.