ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 15 ಸಾವಿರ ಹುದ್ದೆಗಳಿಗೆ ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬೆಂಗಳೂರಿನ ಕೆಂಗೇರಿ ಉಪ ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ ಬಳಿಕ ಮಾತನಾಡಿದಂತ ಅವರು, ನಿಲ್ದಾಣವನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸಿ, ಜನವರಿ ವೇಳೆಗೆ ಸಾರ್ವಜನಿಕರ ಬಳಕೆಗೆ ದೊರಕಿಸೋ ಪ್ರಯತ್ನ ಮಾಡಲಾಗುವುದು ಎಂದರು.
ಬಿಎಂಟಿಸಿಯಲ್ಲಿ 15 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 28 ಕ್ಷೇತ್ರಗಳಲ್ಲಿ 2,200 ಬಸ್ ಗಳನ್ನು ರಸ್ತೆಗೆ ಇಳಿಸೋದಕ್ಕೆ ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.
ದ್ವಿತಿಯ PUC ಪೂರಕ ಪರೀಕ್ಷೆ-2 ಪಾಸಾದವರಿಗೆ ಗುಡ್ ನ್ಯೂಸ್: ಈ ವರ್ಷವೇ ‘ಪದವಿ’ ಪ್ರವೇಶಕ್ಕೆ ಅವಕಾಶ