ಬೆಳಗಾವಿ : ರಾಜ್ಯ ಸರ್ಕಾರದ ( Karnataka Government ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ ಸುಮಾರು 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿಯೇ ಕ್ರಮವಹಿಸಲಾಗುವುದು.ಈಗಾಗಲೇ 11 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿಯಾಗಿದೆ. 12 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ
ವಿಧಾನ ಪರಿಷತ್ತಿನಲ್ಲಿ ಕಲಾಪದಲ್ಲಿಂದು ಸದಸ್ಯರಾದ ಸಿ ಎನ್ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸುತ್ತ ಮುಖ್ಯಮಂತ್ರಿಗಳು ಈ ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 7 ಲಕ್ಷ 60 ಸಾವಿರ ಮಂಜೂರಾಗಿವೆ.ಇದರಲ್ಲಿ 5 ಲಕ್ಷ 11 ಸಾವಿರ ಹುದ್ದೆಗಳಲ್ಲಿ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಸುಮಾರು 2 ಲಕ್ಷ 50 ಸಾವಿರ ಹುದ್ದೆಗಳು ಖಾಲಿ ಇವೆ. ರಾಜ್ಯದಾದ್ಯಂತ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಶೇ.34 ರಷ್ಟು ಹುದ್ದೆಗಳು ಖಾಲಿ ಇವೆ. ಆದಾಗ್ಯೂ, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಲಿಯಿರುವ ಹುದ್ದೆಗಳಲ್ಲಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ದೈನಂದಿನ ನಿರ್ವಹಿಸಲು ವ್ಯವಸ್ಥೆ ಕೆಲಸ-ಕಾರ್ಯಗಳನ್ನು ನಿರ್ವಹಿಸಲು ಮಾಡಲಾಗಿರುತ್ತದೆ. ಇದರಿಂದಾಗಿ ಸಾರ್ವಜನಿಕರ ಕೆಲಸ-ಕಾರ್ಯಗಳು ವಿಳಂಬವಾಗುತ್ತಿರುವುದಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ‘ರೇನ್ಬೋ ಚಿಲ್ಡ್ರನ್ ಆಸ್ಪತ್ರೆ ಹೆರಿಗೆ ಕೇಂದ್ರ’ವನ್ನು ನಟಿ ಅಮೂಲ್ಯ ಉಧ್ಘಾಟನೆ
82,700 ಹುದ್ದೆಗಳ ಹೊರಗುತ್ತಿಗೆ ಭರ್ತಿಗೆ ಕ್ರಮ; ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದದ ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ವಾಹನ ಚಾಲಕರು ಹಾಗೂ ಗ್ರೂಪ್-ಡಿ ವೃಂದದಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ಹೊರಗುತ್ತಿಗೆ ಆಧಾರದ ಮೇರೆಗೆ ಸುಮಾರು 82,700 ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.