ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಖಾಳಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.* ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.
ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.