ಬೆಂಗಳೂರು : ಬೆಂಗಳೂರಿನಲ್ಲಿ ಫೆಬ್ರವರಿ 12ರಂದು ಬೃಹತ್ ಉದ್ಯೋಗ ಮೇಳ ( JOB FAIR) ಆಯೋಜನೆ ಮಾಡಲಾಗಿದೆ.
ಬೆಂಗಳೂರಿನ ಬಸವನಗುಡಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹರು ಪಾಲ್ಗೊಳ್ಳಬಹುದಾಗಿದೆ .ಶ್ರೀ ಕೃಷ್ಣ ಪಿಯು ಕಾಲೇಜು, ನಂ 2ಪಿ, ಐಟಿಐ ಲೇಔಟ್, ಕತ್ರಿಗುಪ್ಪೆ ಮುಖ್ಯ ರಸ್ತೆ, ಬಿಎಸ್ಕೆ 3ನೇ ಹಂತ, ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಇಂಜಿನಿಯರಿಂಗ್, ಇನ್ನಿತರೆ ಕೋರ್ಸ್ಗಳನ್ನು ವ್ಯಾಸಂಗ ಮಾಡಿದವರು ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ. ಇನ್ಫೋಸಿಸ್, ಟಿಸಿಎಸ್, ಎಸ್ಬಿಐ ಲೈಫ್, ಟೊಯೋಟಾ, , ಎಲ್ & ಟಿ ಸೇರಿದಂತೆ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 980005152, 7676338272, 9916735881. ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.