ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿ 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-124ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ ಆಡಳಿತ ಇಲಾಖೆ ಪ್ರಸ್ತಾಪಿಸಿದಂತೆ 2000 ಬೋಧಕ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿಸಿದೆ ಎಂದಿದ್ದಾರೆ.
ಹೀಗಿವೆ ಖಾಲಿ ಹುದ್ದೆಗಳ ವಿವರ
- ಸರ್ಕಾರಿ ಪ್ರಥಮ ದರ್ಜೆ ಕಾಲೇಜು- 826 ಹುದ್ದೆಗಳು
- ಸರ್ಕಾರಿ ಪಾಲಿಟೆಕ್ನಿಕ್ – 941 ಹುದ್ದೆಗಳು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು- 186 ಹುದ್ದೆಗಳು
- ಯುವಿಸಿಇ ವಿಶ್ವವಿದ್ಯಾಲಯ – 47 ಹುದ್ದೆಗಳು
ಒಟ್ಟಾರೆಯಾಗಿ 2000 ಭೋದಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮಿತಿಸಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ.
ಇನ್ನೂ ಹೊಸ ಹುದ್ದೆಗಳನ್ನು ಸೃಜಿಸುವ ಹಾಗೂ ಸದರಿ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರಿಂದ ಭರ್ತಿ ಮಾಡುವ ಕುರಿತು ಪ್ರತ್ಯೇಕವಾಗಿ ಪರಿಶೀಲಿಸಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಡಳಿತ ಇಲಾಖೆಗೆ ತಿಳಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು

‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಟೀಸರ್ ಬಿಡುಗಡೆ | The Kerala Story 2 Teaser
ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ








