ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ವಿವಿಧ ವೃಂದದ ಹುದ್ದೆಗಳನ್ನು ಸೃಜಿಸೋದಕ್ಕೆ ಮಂಜೂರಾತಿ ನೀಡುವ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರ ಪತ್ರಗಳಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಪುಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಬಾಕಿಯಿದ್ದು ಹಾಗೂ ಪ್ರತಿ ವರ್ಷ ಪಕರಣಗಳ ದಾಖಲಾತಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದರಿಂದ ನ್ಯಾಯಾಲಯಗಳ ಕಾರ್ಯ ನಿರ್ವಹಣೆಯೂ ಸಹ ಕಾಲಕಾಲಕ್ಕೆ ಹೆಚ್ಚುತ್ತಿದೆ. ಹಾಲಿ ಸಿಬ್ಬಂದಿಗಳಿಗೆ ಪುಕರಣಗಳ ದಾಖಲಾತಿ ಮತ್ತು ವಿಲೇವಾರಿ, ಲೋಕ ಅದಾಲತ್‌ಗಳು ಮತ್ತು ಮಧ್ಯಸ್ಥಿಕೆ ಚಟುವಟಿಕೆಗಳಿಂದಾಗಿ ಹೆಚ್ಚಿನ ಕೆಲಸದ ಹೊರೆ ಎದುರಾಗಿದ್ದು, ನಿಗದಿತ ಸಮಯದೊಳಗೆ ಕೆಲಸ ನಿರ್ವಹಿಸುವುದು ತುಂಬಾ ಕಷ್ಟಕರವಾಗಿದೆ ಎಂದಿದೆ.
ಆದ್ದರಿಂದ ನ್ಯಾಯಾಲಯದ ವಿಚಾರಣೆಗಳು ಸುಗಮವಾಗಿ ನಡೆಯಲು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಒಟ್ಟು 850 ವಿವಿಧ ವೃಂದದ ಹುದ್ದೆಗಳ ಉನ್ನತೀಕರಣ, 715 ವಿವಿಧ ವೃಂದದ ಹುದ್ದೆಗಳ ಸೃಜಿಸಲು, ಇದಕ್ಕಾಗಿ ಅಂದಾಜು ರೂ.7,30,97,47,836/- ವೆಚ್ಚವಾಗುತ್ತದೆ ಎಂದು ತಿಳಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮಾನ್ಯ ಉಚ್ಚ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಈ ಕೆಳಕಂಡ ವಿವಿಧ ವೃಂದದ ಒಟ್ಟು 226 ಹುದ್ದೆಗಳನ್ನು ಸೃಜಿಸಿ ಆದೇಶಿಸಿದ್ದಾರೆ.
ಈ ಹುದ್ದೆಗಳ ಭರ್ತಿಗೆ ಮಂಜೂರಾತಿ
- ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ 68 ಹುದ್ದೆಗಳ ಭರ್ತಿಗೆ ಮಂಜೂರಾತಿ
- ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಖಾಲಿ ಇರುವಂತ 61 ಹುದ್ದೆಗಳ ಭರ್ತಿಗೆ ಮಂಜೂರಾತಿ
- ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಖಾಲಿ ಇರುವಂತ 97 ಹುದ್ದೆಗಳ ಭರ್ತಿಗೆ ಮಂಜೂರಾತಿ


ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್ ಎಸ್ ಭೋಸರಾಜು








