ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಎಚ್ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ತಾಲ್ಲೂಕು ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಸೇವೆಯು ದಿನವಿಡೀ ಲಭ್ಯವಿರಬೇಕು ಎಂಬ ವ್ಯವಸ್ಥೆ ತರಲು ನಿರ್ಧಾರ ಮಾಡಲಾಗಿದೆ. ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರನ್ನು ನೇಮಿಸಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಎಚ್ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಹೇಳಿದ್ದಾರೆ.
ಓಲಾ, ಉಬರ್ ಆ್ಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ಮುಂದೆ ಈ ವಾಹನಗಳು ಡಿಸಿ, ಸಿಇಒ, ಡಿಎಚ್ಒ ಕಂಟ್ರೋಲ್ನಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಈ ಕುರಿತಾದ ಮಸೂದೆ ಮಂಡಿಸಲಾಗುವುದು. ಆ್ಯಪ್ ನಲ್ಲಿಯೇ ಆಂಬುಲೆನ್ಸ್ ಬುಕಿಂಗ್ ಗೆ ಅವಕಾಶ ಕಲ್ಪಿಸಲಾಗುವುದು. ರಾಜ್ಯದಲ್ಲಿ ಅನೇಕ ಕಂಪನಿಗಳು ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದು, ಅವುಗಳ ಬಗ್ಗೆ ಸಾಕಷ್ಟು ದೂರುಗಳಿವೆ. ಹೀಗಾಗಿ ಆಂಬುಲೆನ್ಸ್ ಗಳಲ್ಲಿ ಯಾವ ವ್ಯವಸ್ಥೆ ಇರಬೇಕು. ದರ ಎಷ್ಟಿರಬೇಕು ಎಂಬುದನ್ನು ಸರ್ಕಾರದಿಂದ ಕಾಯ್ದೆ ರೂಪಿಸಲಾಗುವುದು.
ಶಾಸನ ಜಾರಿಯಾದ ನಂತರ ಆಂಬುಲೆನ್ಸ್ ಸೇವೆ ಒದಗಿಸುವವರು ಖಾಸಗಿ ಆಸ್ಪತ್ರೆಗಳ ರೀತಿ ನೋಂದಣಿ ಮಾಡಿಕೊಳ್ಳಬೇಕು. ಆಂಬುಲೆನ್ಸ್ ಗಳಿಗೆ ಸೇವೆಯ ಆಧಾರದಲ್ಲಿ ಸರ್ಕಾರವೇ ದರ ನಿಗದಿ ಮಾಡಲಿದೆ. ಆ್ಯಪ್ ನಲ್ಲಿ ಬುಕ್ ಮಾಡಬೇಕಿದೆ.