ರಾಮನಗರ : ಜ. 6 ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಆಯೋಜನೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ರಾಮನಗರ ಜಾಬ್ ಪಾರ್ ಆಲ್ ಹೆಸರಿನಲ್ಲಿ ಮೆಗಾ ಜಾಬ್ ಪೇರ್ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿರುವ ರಾಜ್ಯ ಸರ್ಕಾರ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತಿದೆ.
ಬಿಜಿಎಸ್ ವರ್ಲ್ಡ್ ಸ್ಕೂಲ್ ಹಾಗೂ ಪಿಯು ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜನವರಿ 6 ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದು, ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 7090001125 / 7411845322 / 9964784178 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.
Good News: ‘ಆಧಾರ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಈಗ ಆನ್ ಲೈನ್ ಮೂಲಕ ವಿಳಾಸ ಬದಲಾವಣೆಗೆ ಅವಕಾಶ | Aadhaar Card
BIGG NEWS : ಜನವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ