ಬೆಂಗಳೂರು : ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಎರಡು ವರ್ಷಗಳ ಅವಧಿಗೆ ಕೆಲಸ ಮಾಡಲು ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಹರು 20/3/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ಐಸಿಎಆರ್ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು https://raitamitra.karnataka.gov.in ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡು ಸೂಕ್ತ ದಾಖಲಾತಿಗಳ ಜೊತೆ ಭರ್ತಿ ಮಾಡಿ ಸಲ್ಲಿಕೆ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು Director of Agriculture, Commissionerate of Agriculture, Seshadri Road, Bengaluru-01 ಇಲ್ಲಿಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22074161 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
BIGG NEWS : ದೋಷ ಪೂರಿತ ಗೀಜರ್ ಕೊಟ್ಟ ಕಂಪನಿಗೆ ದಂಡ ಮತ್ತು ಪರಿಹಾರ ಕೊಡಲು ಗ್ರಾಹಕರ ಆಯೋಗದ ಆದೇಶ