Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳಿಗೆ ಸಿಹಿಸುದ್ದಿ: KPSCಯಿಂದ ಗ್ರೂಪ್-ಸಿ ಹುದ್ದೆಗಳಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ | KPSC Recruitment 2024
KARNATAKA

‘ಉದ್ಯೋಗಾಕಾಂಕ್ಷಿ’ಗಳಿಗೆ ಸಿಹಿಸುದ್ದಿ: KPSCಯಿಂದ ಗ್ರೂಪ್-ಸಿ ಹುದ್ದೆಗಳಿಗೆ ‘3 ವರ್ಷ ವಯೋಮಿತಿ’ ಸಡಿಲಿಸಿ ಆದೇಶ | KPSC Recruitment 2024

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ.  ಆಯೋಗವು 2023-24ನೇ ಸಾಲಿನಲ್ಲಿ ಉಲ್ಲೇಖ(01)ರ ಅಧಿಸೂಚನೆಯಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ವೃಂದದ 60 (ಉಳಿಕೆ ಮೂಲ ವೃಂದದ) ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಲಾಗಿರುತ್ತದೆ. ಸದರಿ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ಅರ್ಹತೆ- 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನ 2024, ದಿನಾಂಕ:10,09,2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್-1 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಆನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ್ದಾರೆ.

ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ, ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿದ್ದಾರೆ.

ಹೀಗಿದೆ ಪರಿಷ್ಕೃತ ವಯೋಮಿತಿ ಸಡಿಲಿಕೆ ವಿವರ

  • ಸಾಮಾನ್ಯ ಅರ್ಹತೆ- ಗರಿಷ್ಠ 38 ವರ್ಷಗಳು
  •  

    ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ ಗರಿಷ್ಠ 41 ವರ್ಷಗಳು

  •  

    ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷಗಳು

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ದಿ:15-03-2024ರ ಅಧಿಸೂಚನೆಯಲ್ಲಿನ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (Ole time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:15-10-2024 ರಿಂದ 30-10-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ವಿಸ್ತರಿತ ಕೊನೆಯ ದಿನಾಂಕವಾದ 30-10-2024ಕ್ಕೆ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ:-
1.ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
2.ದಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ ಉಲ್ಲೇಖಿತ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!

BIG NEWS: ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ರೆಡಿ, ಮೂರು ಕ್ಷೇತ್ರ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

Share. Facebook Twitter LinkedIn WhatsApp Email

Related Posts

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

1 Min Read

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

1 Min Read

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

1 Min Read
Recent News

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

BREAKING : ಜೈಪುರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಮೂವರು ಸಜೀವ ದಹನ!

State News
KARNATAKA

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ನಾಲ್ಕೂ…

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.