ಬೆಂಗಳೂರು: ನಗರದಲ್ಲಿ ಆರಂಭಗೊಳ್ಳುತ್ತಿರುವಂತ “ನಮ್ಮ ಕ್ಲಿನಿಕ್” ನಲ್ಲಿ ಕಾರ್ಯ ನಿರ್ವಹಿಸೋದಕ್ಕಾಗಿ ವೈದ್ಯರು, ಶುಶ್ರೂಷಕಿಯರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಬಿಬಿಎಂಪಿ ಆಹ್ವಾನಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ “ನಮ್ಮ ಕ್ಲಿನಿಕ್” ಗಳನ್ನು ಆರಂಭಿಸುತ್ತಿರೋದಾಗಿ ತಿಳಿಸಿದೆ.
BREAKING NEWS: ಬೆಚ್ಚಿಬಿದ್ದ ರಾಯಚೂರು ಜನತೆ: ಹಾಡಹಗಲೇ ಗುತ್ತಿಗೆದಾರರನ್ನು ಕೊಚ್ಚಿ ಕೊಲೆ
ಈ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞನರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ತಲಾ 8 ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ವಯೋಮಿತಿಯನ್ನು ಮೀರಿರಬಾರದು.
• ಸಾಮಾನ್ಯ ವರ್ಗ- 35 ವರ್ಷ
• 2ಎ, 2ಬಿ, 3ಎ, 3ಬಿ- 38 ವರ್ಷ
• ಪ.ಜಾತಿ, ಪ.ಪಂಗಡ, ವರ್ಗ-1,- 40 ವರ್ಷ
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.
ಆಸಕ್ತರು ಬಿಬಿಎಂಪಿ ವೆಬ್ಸೈಟ್ನಲ್ಲಿ ಇರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ನಕಲು ಪ್ರತಿ ಮತ್ತು 2 ಭಾವಚಿತ್ರದೊಂದಿಗೆ ಮೇಲೆ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು.
ಪಾಗಲ್ ಪ್ರೇಮಿಯಿಂದ ಮಾಜಿ ಪ್ರಿಯತಮೆ ಶಿರಚ್ಛೇದನ: ಆರೋಪಿ ಒಪ್ಪಿಸುವಂತೆ ಯುವತಿ ಸಹೋದರ ಠಾಣೆಯ ಮುಂದೆ ಹೈಡ್ರಾಮಾ
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22975516, Email id: choph515@gmail.com ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್ಸೈಟ್ www.bbmp.gov.in ಅನ್ನು ಸಂಪರ್ಕಿಸಲು ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ರವರು ತಿಳಿಸಿರುತ್ತಾರೆ.