Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KSRTC’ ಯಲ್ಲಿ ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KSRTC’ ಯಲ್ಲಿ ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ!

By kannadanewsnow5712/09/2024 5:52 AM

ಮಡಿಕೇರಿ : ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ ಶನಿವಾರಸಂತೆಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ಘಟಕವಿದೆ. ಜೊತೆಗೆ ಕುಶಾಲನಗರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುತ್ತಿದೆ. ಈ ಎರಡು ಘಟಕಕ್ಕೆ ವಿಭಾಗೀಯ ಕಚೇರಿ ಆರಂಭಿಸಲು ಕಷ್ಟಸಾಧ್ಯ. ಆದ್ದರಿಂದ ಹತ್ತಿರದ ರಾಮನಾಥಪುರ ಇತರೆ ಒಟ್ಟು 4 ಘಟಕಗಳನ್ನು ಒಳಗೊಂಡು ಒಂದು ವಿಭಾಗೀಯ ಕಚೇರಿ ಆರಂಭಿಸಬೇಕು. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪ್ರಯತ್ನಿಸಲಾಗುವುದು ಎಂದು ಸಾರಿಗೆ ಸಚಿವರು ಹೇಳಿದರು.

ಸರ್ಕಾರದ ಶಕ್ತಿ ಯೋಜನೆ ನಂತರ ಕರ್ನಾಟಕ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮತ್ತು ಸುಧಾರಣೆಯಾಗಿದೆ. ಪ್ರತಿನಿತ್ಯ ಸಾವಿರಾರು ಮಹಿಳೆಯರು ಬಸ್‍ನಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆಯು ಹೆಚ್ಚಾಗಿದೆ. ಆದ್ದರಿಂದ 4500 ಹೊಸ ಬಸ್‍ಗಳನ್ನು ಸಹ ಖರೀದಿಸಲಾಗಿದೆ. ಜೊತೆಗೆ ಚಾಲಕ, ನಿರ್ವಾಹಕ ಸೇರಿದಂತೆ 9 ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್, 12 ರಂದು ಬೆಂಗಳೂರಿನಲ್ಲಿ ಹೊಸ ಬಸ್‍ಗಳ ಸಂಚಾರ ಸೇರಿದಂತೆ ಸಾರಿಗೆ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

ಜಿಲ್ಲೆಯ ಕೊಡ್ಲಿಪೇಟೆಯಲ್ಲೂ ಸಹ ನೂತನ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಹಾಗೆಯೇ ಖಾಸಗಿ ಬಸ್ ಮಾಲೀಕರ ಸಮಸ್ಯೆಯನ್ನು ಸಹ ಕೇಳಲಾಗಿದೆ. ಒಟ್ಟಾರೆ ಜಿಲ್ಲೆಯ ಜನರ ಸುಗಮ ಸಾರಿಗೆ ಸಂಚಾರಕ್ಕೆ ಎಲ್ಲಾ ರೀತಿಯ ಕ್ರಮವಹಿಸಲಾಗುವುದು ಎಂದು ಸಚಿವರು ನುಡಿದರು. ಜಿಲ್ಲೆಯಲ್ಲಿ ಹೊಸ ಬಸ್ ಮಾರ್ಗಕ್ಕೂ ಸಹ ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವರು ನುಡಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕೊಡಗು ಜಿಲ್ಲೆಯ ಶನಿವಾರಸಂತೆಯ ಭಾಗದಲ್ಲಿ ಹಲವು ದಶಕಗಳಿಂದ ಬಸ್ ನಿಲ್ದಾಣ ಮಾಡಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿತ್ತು. ಆ ನಿಟ್ಟಿನಲ್ಲಿ ಈಗ ಕಾಲ ಕೂಡಿಬಂದಿದ್ದು, ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

‘ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಮಾನ್ಯ ಸಚಿವರು ಪ್ರತ್ಯೇಕ ವಿಭಾಗೀಯ ಕಚೇರಿ ಆರಂಭಕ್ಕೆ ಅವಕಾಶ ಮಾಡಬೇಕು. ಪ್ರತ್ಯೇಕ ವಿಭಾಗೀಯ ಘಟಕ ಆರಂಭಿಸುವುದರ ಜೊತೆಗೆ ಬಸ್‍ಗಳಿಗೆ ಕೆಎ12 ನೋಂದಣಿ ಆಗಬೇಕು ಎಂದು ಶಾಸಕರು ಕೋರಿದರು.’

ಈಗಾಗಲೇ ಜಿಲ್ಲೆಯಲ್ಲಿ ಎರಡು ಬಸ್ ಘಟಕಗಳು ಇರುವುದರಿಂದ ಹತ್ತಿರದ ರಾಮನಾಥ ಪುರ ಇತರೆ ಡಿಪೋ ಸೇರಿಕೊಂಡು ಮಡಿಕೇರಿಯಲ್ಲಿ ವಿಭಾಗೀಯ ಘಟಕ ಆರಂಭಿಸಬೇಕು. ಜೊತೆಗೆ ಹೊಸ ಮಾರ್ಗಗಳ ಬಸ್ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಕೋರಿದರು. ಮುಂದಿನ ದಿನಗಳಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೂ ದುಂಡಳ್ಳಿಯಲ್ಲಿ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಶನಿವಾರಸಂತೆ ಭಾಗದ ಜನರ ಹಲವು ದಶಕಗಳ ಬೇಡಿಕೆಯನ್ನು ಮಾನ್ಯ ಸಚಿವರು ಈಡೇರಿಸಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ನಿರ್ಮಾಣದ ಬಳಿ ಇರುವ ಜಾಗವನ್ನು ಗ್ರಾ.ಪಂ.ಗೆ ನೀಡುವಂತಾಗಬೇಕು. ಇದರಿಂದ ಮಳಿಗೆ ನಿರ್ಮಾಣ ಮಾಡಿ ಗ್ರಾ.ಪಂ. ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.

administrators in `KSRTC'! Good news for job seekers: Recruitment for 9 thousand posts including drivers ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ 'ಬೃಹತ್ ಉದ್ಯೋಗ ಮೇಳ' ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ!
Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.