Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2,022 ಇಲಾಖೆಯಿಂದ ಹುದ್ದೆಗಳ ನೇಮಕಾತಿ!
KARNATAKA

ಉದ್ಯೋಗವಾರ್ತೆ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2,022 ಇಲಾಖೆಯಿಂದ ಹುದ್ದೆಗಳ ನೇಮಕಾತಿ!

By kannadanewsnow0705/03/2024 11:04 AM
vidhana soudha
vidhana soudha

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲಿಯೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜನಿಯರ್, 288 ಸಹಾಯಕ ಎಂಜನಿಯರ್ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗವು ಕಳೆದ ಜನವರಿ 31ರಂದು ಅಂತಿಮಪಟ್ಟಿಯ ಅಧಿಸೂಚನೆಯನ್ನು ಹೊರಡಿಸಿದೆ. ಈ ಪೈಕಿ 24 ಸಹಾಯಕ ಕಾರ್ಯಪಾಲಕ ಎಂಜನಿಯರ್ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವು ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನುನೇರ ನೇಮಕಾತಿ ಕೋಟಾದಡಿ ಆನ್ಲೈನ್ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಿಳಿಸಲಾಗಿದೆ. ಈ ಹುದ್ದೆಗಳಳ್ಲಿ 20 ಕಿರಿಯ ಎಂಜನಿಯರ್, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯರು ಸೇರಿದ್ದು, ಈ ಸಂಬಂಧದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪಂಚಾಯತ್ ರಾಜ್ ಎಂಜನಿಯರಿಂಗ್ ಇಲಾಖೆಯಲ್ಲಿ ಐವರು ಸಹಾಯಕ ಕಾರ್ಯಪಾಲಕ ಎಂಜನಿಯರ್ಗಳ ನೇರ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳೆದ 24ರಂದು ಸೂಚಿಸಲಾಗಿದೆ, ಇದೇ ಇಲಾಖೆಯಲ್ಲಿನ 2 ಪ್ರಥಮ ದರ್ಜೆ ಲೆಕ್ಕ ಸಹಾಯಕ, 49 ದ್ವಿತೀಯ ದರ್ಜೆ ಸಹಾಯಕ ಮತ್ತು 6 ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬಲು ಲೋಕ ಸೇವಾ ಆಯೋಗಕ್ಕೆ ಸೂಚಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಗತ್ಯವಾದ 40 (ಇವುಗಳಲ್ಲಿ 8 ಹುದ್ದೆಗಳು ಕಲ್ಯಾಣ ಕರ್ನಾಟಕ) ಗ್ರೂಪ್ ಎ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಾದ ಕಾರ್ಯನಿರ್ವಾಹಕ ಅಧಿಕಾರಿ/ಸಹಾಯಕ ಕಾರ್ಯದರ್ಶಿಗಳನ್ನು ಭರ್ತಿ ಮಾಡಲು ಲೋಕಸೇವಾ ಆಯೋಗವು ಕಳೆದ 26ರಂದು ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದ್ದಾರೆ.

ಹಾಗೆಯೇ, ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 256 ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಇವುಗಳಲ್ಲಿ 106 ಹೈ.ಕ), 220 ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) (ಇವುಗಳಲ್ಲಿ 85 ಹೈ.ಕ), 343 ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-2) (ಇವುಗಳಲ್ಲಿ 52 ಹೈ.ಕ) ಮತ್ತು 105 ದ್ವಿತೀಯ ದರ್ಜೆ ಲೆಕ್ಕ ಸಹಾಯಕ (ಇವುಗಳಲ್ಲಿ 50 ಹೈ.ಕ) ಹುದ್ದೆಗಳನ್ನು ನೇರವಾಗಿ ತುಂಬಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಶೀಘ್ರದಲ್ಲೇ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಗಳಲ್ಲಿ ಖಾಲಿ ಇರುವ 100 ಪ್ರಥಮ ದರ್ಜೆ ಸಹಾಯಕರು, 200 ದ್ವಿತೀಯ ದರ್ಜೆ ಸಹಾಯಕರು ಮತ್ತು ಕಲ್ಯಾಣ ಕರ್ನಾಟಕ ವೃಂದದ 48 ಪ್ರಥಮ ದರ್ಜೆ ಸಹಾಯಕರು ಹಾಗೂ 109 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತುಂಬಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಹೇಳಿದ್ದಾರೆ.

“ತಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 2022 ಹುದ್ದೆಗಳನ್ನು ತುಂಬಿಸಲು ಬದ್ಧತೆಯನ್ನು ತೋರುವ ಮೂಲಕ ಯುವಜನರಲ್ಲಿ ಹೊಸ ಆಶಯಗಳನ್ನು ಮೂಡಿಸುವದರೊಂದಿಗೆ ಗ್ರಾಮೀಣ ಜನರ ಕೆಲಸ ಕಾರ್ಯಗಳು ವಿಳಂಬರಹಿತವಾಗಿ ನಡೆಯಲು ಅನುವು ಮಾಡಿಕೊಡುವ ಸಂಕಲ್ಪ ಮಾಡಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Good news for job seekers: Rural Development Department Recruitment 2022 ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲಿ ಗ್ರಾಮೀಣಾಭಿವೃದ್ಧಿ 2022 ಇಲಾಖೆಯಿಂದ ಹುದ್ದೆಗಳ ನೇಮಕಾತಿ
Share. Facebook Twitter LinkedIn WhatsApp Email

Related Posts

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM1 Min Read

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM1 Min Read

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM1 Min Read
Recent News

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM
State News
KARNATAKA

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0928/06/2025 9:49 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1,…

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.