ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ ಶೀಘ್ರವೇ 400ಕ್ಕೂ ಹೆಚ್ಚಿನ ಸಬ್ ಇನ್ಸ್ಪೆಕ್ಟರ್ ಗಳ (PSI) ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯದಲ್ಲಿ 400ಕ್ಕೂ ಹೆಚ್ಚಿನ ಪಿಎಸ್ ಐಗಳ ನೇಮಕಾತಿ ಸಂಬಂಧ ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರವೇ ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಇನ್ನು 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ. ಈ ನೇಮಕಾತಿ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಮೀಸಲು ಸಂಬಂಧ ತಾಂತ್ರಿಕ ಅಡಚರಣೆ ಎದುರಾಗಿತ್ತು. ಈ ಬಗ್ಗೆ ಡಿಐಪಿಆರ್ನಿಂದ ಅಭಿಪ್ರಾಯ ಕೋರಲಾಗಿದೆ ಎಂದು ಹೇಳಿದ್ದಾರೆ.