ಬೆಂಗಳೂರು: ರಾಷ್ಟ್ರೀಯ ಯುವದಿನದ ಸಂದರ್ಭದಲ್ಲಿಯೇ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಯೋಜನೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಿದೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ನಾವು ನುಡಿದಂತೆ ನಡೆಯುತ್ತಿದ್ದೇವೆ. ಬಿಜೆಪಿಯವರಿಗೆ ಇದಕ್ಕೆ ಹೊಟ್ಟೆ ಕಿಚ್ಚು ಬಂದಿದೆ. ಯುವನಿಧಿ ಯೋಜನೆ 100ಕ್ಕೆ 100ರಷ್ಟು ಅನುಷ್ಠಾನಗೊಳಿಸೋದಾಗಿ ತಿಳಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಬರೀ ಅಕ್ರಮ, ಭ್ರಷ್ಟಾಚಾರದಲ್ಲಿ ಮುಳಿಗಿತ್ತು. ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಇಂತಹ ನಿರುದ್ಯೋಗ ನಿವಾರಿಸೋದಕ್ಕೆ ಮೋದಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ರೇ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಈಗ ಯುವನಿಧಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆ ನಂತ್ರ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಡೋ ನಿಟ್ಟಿನಲ್ಲಿ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ನಡೆಸೋದಾಗಿ ತಿಳಿಸಿದರು.
ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’
ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು