ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಯುವ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳನ್ನು ಪೂರ್ಣಗೊಳಿಸಿರುವ ರಾಜ್ಯದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯ ಸರ್ಕಾರದಿಂದಲೇ ಫೆ.26 ಮತ್ತು 27ರಂದು ನಗರದ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ’ ಹೆಸರಿನ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇಳದ ಕುರಿತು ಮಾಹಿತಿ ನೀಡಿದರು.
ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ : 338 ಶಾಲಾ ವಾಹನ ಚಾಲಕರ ವಿರುದ್ದ ಕೇಸ್
ಡಾ.ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಫೆ.26ರಂದು ಮುಖ್ಯಮಂತ್ರಿಗಳು ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪದವಿ, ತಾಂತ್ರಿಕ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿರುವವರಿಗೆ ಉದ್ಯೋಗ ಒದಗಿಸುವ ಮೇಳ ಇದಾಗಿದೆ. 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಅಂದಾಜು ಒಂದು ಲಕ್ಷ ಹುದ್ದೆಗಳು ಲಭ್ಯವಿದೆ. ಈವರೆಗೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನೋಂದಣಿ ಮಾಡಿದ್ದಾರೆ ಎಂದರು.
ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಬಿಎಂಟಿಸಿಯಿಂದ’ ಉಚಿತ ಪ್ರಯಾಣ ಸೌಲಭ್ಯ
ಉದ್ಯೋಗ ಮೇಳದಲ್ಲಿ 600ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಯಾವ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ನೀಡಲು ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ ಎಂದರು.ಉದ್ಯೋಗ ಸಿಗದವರಿಗೆ ಕೌಶಲ್ಯ ತರಬೇತಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಮೇಳದಲ್ಲಿ ಕೆಲಸ ಸಿಗದವರಿಗೆ ಸರ್ಕಾರದಿಂದ ಅಗತ್ಯ ಕೌಶಲ್ಯ ತರಬೇತಿ ನೀಡುವ ಉದ್ದೇಶವಿದೆ. ಇದಕ್ಕಾಗಿ ನುರಿತತಜ್ಞರುಮುಂದೆಬಂದಿದ್ದಾರೆ. ಅಭ್ಯರ್ಥಿಗಳು ತರಬೇತಿ ಪಡೆದು ನಂತರ ಉದ್ಯೋಗ ಪಡೆಯಲು ಪ್ರಯತ್ನಿಸಬಹುದು.
ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕನ ಸಾವು
ಅಲ್ಲದೆ ಉದ್ಯೋಗ ಮೇಳಕ್ಕಾಗಿ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ವಿಶೇಷ ಬಸ್ ವ್ಯವಸ್ಥೆ ಇರಲಿದೆ.ಉದ್ಯೋಗ ಮೇಳದ ಸಂಬಂಧ ಮಾಹಿತಿಗೆ ಉದ್ಯೋಗಮೇಳ ಸಹಾಯವಾಣಿ: 18005999918 ಕ್ಕೆಅಭ್ಯರ್ಥಿಗಳು ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.