Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 3000 ಪವರ್’ಮ್ಯಾನ್ ಗಳ ನೇಮಕಾತಿ.!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 3000 ಪವರ್’ಮ್ಯಾನ್ ಗಳ ನೇಮಕಾತಿ.!

By kannadanewsnow5719/02/2025 9:15 AM

ದಾವಣಗೆರೆ : ಉದ್ಯೊಗಾಕಾಂಕ್ಷಿಗಳಿಗೆ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಹೇಳಿದರು.

ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್; ರೈತರ ಕೃಷಿ ಪಂಪ್ ಸೆಟ್ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್ಸೆಟ್ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್ಸೆಟ್ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ; ರೈತರ ಕೃಷಿ ಪಂಪ್ಸೆಟ್ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್ಸೆಟ್ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್ಸೆಟ್ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ; ಕುಸುಮ್ ಬಿ ಯೋಜನೆಯಡಿ ರೈತರ ಪಂಪ್ಸೆಟ್ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

Good news for job seekers: State govt to recruit 3000 powermen soon
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM1 Min Read

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM2 Mins Read

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM3 Mins Read
Recent News

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

21/02/2026 5:47 AM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM
State News
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಕಚೇರಿಗಳ ಸಭೆ-ಸಮಾರಂಭಗಳಲ್ಲಿ `ನಂದಿನಿ ಉತ್ಪನ್ನಗಳ ಬಳಕೆ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ !

By kannadanewsnow5721/02/2026 5:47 AM KARNATAKA 1 Min Read

ಬೆಂಗಳೂರು : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳು…

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.