ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕೆಪಿಎಸ್ಸಿ ಮೂಲಕ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಭಾ ನಾಯಕ ಬೋಸರಾಜು ತಿಳಿಸಿದ್ದಾರೆ.
ಈ ಕುರಿತು ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿರುವ ಅವರು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕೆಪಿಎಸ್ಸಿ ಮೂಲಕ ಭರ್ತಿ ಮಾಡಲಾಗುವುದು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ 2243 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 1070 ಹುದ್ದೆ ಗಳಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿಮಾಡಲಾಗಿದೆ. 928 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಿಗದಿಗೊಳಿಸಬೇಕಾಗಿದೆ ಎಂದರು.