ಬೆಂಗಳೂರು : ಕನ್ನಡಿಗರಿಗೆ ರಾಜ್ಯ ಸರ್ಕಾರವು ಭರ್ಜರಿ ಸಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲಾ ಕೈಗಾರಿಗಳಲ್ಲೂ ಶೇ. 100 ರಷ್ಟು ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.
ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವದಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.