ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ. ಈ ಮೂಲಕ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ. ಇಂತಹ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿತ್ತು.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ ಈ ಕೆಳಗಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್
‘ಮಂಗನ ಕಾಯಿಲೆ’ ಪೀಡಿತರಿ ಗುಡ್ ನ್ಯೂಸ್: ‘ಆಯುಷ್ಮಾನ್ ಕಾರ್ಡ್’ ನಡಿ ‘ಉಚಿತ ಚಿಕಿತ್ಸೆ’ ಸೌಲಭ್ಯ