ಮೈಸೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದ್ದು, ರೈಲ್ವೆ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಿರುವುದರಿಂದ ಕನ್ನಡಿಗರು ಹೆಚ್ಚು ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಜನವರಿಯಿಂದ ಇದುವರೆಗೆ 60,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ರೈಲ್ವೆ ಇಲಾಖೆಯಿಂದ ವಾರ್ಷಿಕ ನೇಮಕಾತಿ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.