ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು : ಕನ್ನಡಿಗರಿಗೆ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಮಂಡಳಿ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ … Continue reading ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ