ಬೆಂಗಳೂರು: 024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ. ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 33 ಸೇನೌವ 2024, ಬೆಂಗಳೂರು, ದಿನಾಂಕ: 10.07.2024
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ. ಅಂತ ತಿಳಿಸಿದೆ.