ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಖಾಲಿ ಇರುವಂತ 504 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿದೆ.

ಈ ಬಗ್ಗೆ ವಿಧಾನಪರಿಷತ್ತಿನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಅವರು ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಆರ್ಥಿಕ ಇಲಾಖೆಗೆ ಒಟ್ಟು 656 ಹುದ್ದೆಗಳ ಭರ್ತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇವುಗಳಲ್ಲಿ 504 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಈ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

ಒಟ್ಟಾರೆಯಾಗಿ ಗ್ರೂಪ್-ಎ 159, ಗ್ರೂಪ್-ಬಿ 225 ಸೇರಿದಂತೆ ಒಟ್ಟು 504 ಹುದ್ದೆಗಳ ಭರ್ತಿಗೆ ಶೀಘ್ರವೇ ಕೆಪಿಎಸ್ಸಿಯಿಂದ ಅಧಿಸೂಚನೆ ಹೊರ ಬೀಳಲಿದೆ. ಕೆಎಎಸ್ ಹುದ್ದೆಯ ಆಕಾಂಕ್ಷಿಗಳು ಈ ಹುದ್ದೆಗೆ ಅಧಿಸೂಚನೆಯ ಬಳಿಕ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಮೂಲಕ ಹುದ್ದೆಯನ್ನು ಪಡೆಯೋದಕ್ಕೆ ಪ್ರಯತ್ನ ಮಾಡಬಹುದಾಗಿದೆ.

 

Share.
Exit mobile version