ಬೆಂಗಳೂರು: ಸಿಎಂ ಸಿದ್ಧರಾಮಯ್ಯನ ( CM Siddaramaiah ) ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ಅನ್ವಯಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಕೆಎಎಸ್ ಹುದ್ದೆ ( KAS Recruitment ) ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಮಾತ್ರ ಅನ್ವಯ ಆಗುವಂತೆ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆ ( KAS Exam 2024 ) ಬರೆಯುವವರಿಗೆ ಒಂದು ಬಾರಿಗೆ ಸೀಮಿತವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಅಂತ ತಿಳಿಸಿದೆ.
ಇನ್ನೂ 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹಿಂದೆ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಅವರು, 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿ ಹೊರಡಿಸಲಿರುವ ಅಧಿಸೂಚನೆಯಡಿ ಅರ್ಹ ಅಭ್ಯರ್ಥಿಗಳು ಒಂದು ಬಾರಿಗೆ ಮಾತ್ರ ಈ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕೊರೋನಾ ಸಾಂಕ್ರಾಮಿಕ ಪಿಡುಗು ಹಾಗೂ ನೇಮಕ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ವಯೋಮಿತಿ ಕಾರಣಕ್ಕೆ ವಂಚಿತರಾಗಲಿದ್ದಾರೆ ಎಂಬ ಆತಂಕವನ್ನು ಸರ್ಕಾರ ಕೊನೆಗಾಣಿಸಿದೆ. ಸಾಮಾನ್ಯ ವರ್ಗ- 35 ರಿಂದ 38, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ರಿಂದ 41, ಎಸ್ಟಿ, ಪ್ರವರ್ಗ-1: 40 ರಿಂದ 43 ವರ್ಷಕ್ಕೆ ವಯೋಮಿತಿ ಏರಿಕೆ ಮಾಡಿದೆ ಎಂದಿದ್ದರು.
BIG NEWS : ಬಿಜೆಪಿ ಜೆಡಿಎಸ್ ನಿಂದ 30 ಜನ ಬರ್ತಾರೆ : ಸ್ಪೋಟಕ ಹೇಳಿಕೆ ನೀಡಿದ ಸಚಿವ ಚೆಲುವರಾಯಸ್ವಾಮಿ
ಸೆಲೆಬ್ರಿಟಿಗಳ 1,000 ಕ್ಕೂ ಹೆಚ್ಚು ‘ಡೀಪ್‌ಫೇಕ್’ ಹಗರಣ ಜಾಹೀರಾತು ವೀಡಿಯೊಗಳನ್ನು ಅಳಿಸಿದ YouTube