ಬೆಂಗಳೂರು: ಕೆಪಿಸಿಸಿ ಕಚೇರಿ ಸ್ವಚ್ಚತಾ ಸಿಬ್ಬಂದಿಗೆ ಮನೆ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು.
ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿತ್ತಾ, ಸಾಧ್ಯವಿದ್ದವರೆಲ್ಲಾ ಸ್ಥಳದಲ್ಲೇ ಪರಿಹಾರ ಒದಗಿಸಿಕೊಳ್ಳುತ್ತಿದ್ದರು.
ಈ ವೇಳೆ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿ ಆಶಾ, ಸುಗಂತಿ, ಜಯಂತಿ ಮತ್ತು ಅರ್ಚನಾ ಅವರು ತಮಗೆ ಮನೆಗಳನ್ನು ಕೊಡಿಸುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗೆ ಸ್ಥಳದಿಂದಲೇ ಕರೆ ಮಾಡಿ ಸ್ವಚ್ಛತಾ ಸಿಬ್ಬಂದಿಯ ದಾಖಲೆ ಪರಿಶೀಲನೆ ನಡೆಸಿ ಅರ್ಹತೆ ಆಧಾರದಲ್ಲಿ ಮನೆಗಳನ್ನು ಒದಗಿಸಿಕೊಡುವಂತೆ ಸೂಚಿಸಿದರು.
2011ರಲ್ಲಿ ‘ಮೂಡಾ ನಿವೇಶನ ಅಕ್ರಮ’ ಹಂಚಿಕೆ ಕುರಿತು ಬಿಜೆಪಿಯಿಂದ ‘ಜೆಡಿಎಸ್’ ಮೇಲೆ ಗುರುತರ ಆರೋಪ
ಶೀಘ್ರವೇ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ