ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮತ್ತೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ ಎಂದಿದೆ.
ದಿನಾಂಕ 31-01-2026ರ ಸಂಜೆ 5.30ರವರೆಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಆದರೇ ಅನೇಕರು ವರ್ಗಾವಣೆ ದಿನಾಂಕ ವಿಸ್ತರಣೆಗೆ ಕೋರಿದ್ದರ ಹಿನ್ನಲೆಯಲ್ಲಿ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 28-02-2026ರ ಸಂಜೆ 5.30ರವರೆಗೆ ಅವಧಿಯನ್ನು ವಿಸ್ತರಿಸಿರುವುದಾಗಿ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಮಗು ಮೇಲೆ ಚಿರತೆ ದಾಳಿ: ಗಂಭೀರ ಗಾಯ








