ಬೆಂಗಳೂರು : ರಾಜ್ಯ ಸರ್ಕಾರವು ಕೆಎಸ್ ಆರ್ ಟಿಸಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ನಾಲ್ಕು ನಿಗಮಗಳ ತುಟ್ಟಿಭತ್ಯೆ ಶೇ. 3.75ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಸಾರಿಗೆ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ವೇತನದಲ್ಲಿ ತುಟ್ಟಿಭತ್ಯೆ ದರವನ್ನು ಶೇ.38.75 ರಿಂದ ಶೇ.42.50 ಕ್ಕೆ ಹೆಚ್ಚಿಳವಾಗಿದೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಆಇ 18 ಎಸ್ಆರ್ಪಿ 2024, ಬೆಂಗಳೂರು ದಿನಾಂಕ 12.03.2024 ರಲ್ಲಿ ಸರ್ಕಾರಿ ನೌಕರರಿಗೆ ದಿನಾಂಕ 01.01.2024 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.38.75 ರಿಂದ ಶೇ.42.50 ಕ್ಕೆ ಹೆಚ್ಚಿಸಿ ಆದೇಶಿಸಿರುತ್ತದೆ.
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿರುವ ಪ್ರಯುಕ್ತ ಕೆಳಕಂಡಂತೆ ಕ್ರಮ ಜರುಗಿಸುವುದು.
- ನಾಲ್ಕೂ ಸಾರಿಗೆ ನಿಗಮಗಳಲ್ಲಿ ಮಾರ್ಚ-2024 ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.38.75 ರಿಂದ ಶೇ.42.50 ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸುವುದು.
- ಕರಾರಸಾ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜನವರಿ-24 ಮತ್ತು ಫೆಬ್ರವರಿ- 2024 ರವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಆದೇಶಿಸಲಾಗುವುದು.
- ಸಹೋದರ ಸಂಸ್ಥೆಗಳಾದ ಬೆಂಮನಸಾ/ವಾಕರಸಾ/ಕಕರಸಾ ಸಂಸ್ಥೆಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸುವುದು. ಸುತ್ತೋಲೆ ತಲುಪಿದ್ದಕ್ಕೆ ಸ್ವೀಕೃತಿ ಕಳುಹಿಸುವುದು