ಬೆಂಗಳೂರು: ಸಾರಿಗೆ ಹಾಗೂ ಮುಜರಾಯಿ ಸಚಿವರು , ಮತ್ತು ಮಾನ್ಯ ಅಧ್ಯಕ್ಷರು , ಕೆ ಎಸ್ ಆರ್ ಟಿ ಸಿ ರವರ ನಿರ್ದೇಶನದಂತೆ, ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಆದೇಶ ನೀಡಿದೆ.
ಆದೇಶದಲ್ಲಿ ಕೆ ಎಸ್ ಆರ್ ಟಿ ಸಿ ಯ ಸಿಬ್ಬಂದಿಗಳಿಗೆ ( ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿಯನ್ನು ಹಾಗೂ ಜುಲೈ-2022 ರಿಂದ ನವೆಂಬರ್-2022 ರ ಮಾಹೆಯ 5 ತಿಂಗಳು, ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ.
ಮುಂದುವರೆದು, ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ ರೂ.6 ಕೋಟಿ ಮೊತ್ತವನ್ನು ದಿನಾಂಕ:15.03.2024 ರಂದು ವ್ಯವಸ್ಥಾಪಕ ನಿರ್ದೇಶಕರು ಮೊತ್ತವನ್ನು ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ.
ಬೆಂಗಳೂರಿಗರೇ ಗಮನಿಸಿ: ಮಾ.15ರವರೆಗೆ ಕೆರೆಮಿತ್ರ ನೋಂದಣಿಗೆ ಅವಧಿ ವಿಸ್ತರಣೆ
ಉದ್ಯೋಗ ವಾರ್ತೆ: KPSCಯಿಂದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ