ಬೆಂಗಳೂರು : ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ನೆಮ್ಮದಿಯ ಸುದ್ದಿ ನೀಡಿದ್ದು, ಇಂದಿನಿಂದ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ ಎನ್ನಲಾಗಿದೆ.
ಆಗಸ್ಟ್ 1 ರಿಂದ ರಾಜ್ಯದಲ್ಲಿ ಕಡಿಮೆ ಬೆಲೆಯ ಮದ್ಯಗಳ ಬೆಲೆ ಹೆಚ್ಚಳ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಬಕಾರಿ ಇಲಾಖೆಗೆ ಸರ್ಕಾರದಿಂದ ಯಾವುದೇ ಸೂಚನೆ ಬಾರದಿರುವುದರಿಂದ ಇಂದಿನಿಂದ ಹೆಚ್ಚಾಗಬೇಕಾಗಿದ್ದ ಮದ್ಯ ದರ ಸದ್ಯಕ್ಕೆ ಮುಂದೂಡಲಾಗಿದೆ.
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮದ್ಯದ ದರದಲ್ಲಿ ಪರಿಷ್ಕರಿಸಲಾಗುವುದು ಎಂದು ಘೋಷಿಸಿದ್ದರು. ಬಳಿಕ ತಾತ್ಕಾಲಿಕವಾಗಿ ತಡೆಹಿಡಯಲಾಗಿತ್ತು. ಆಗಸ್ಟ್ 1 ರಿಂದ ಮದ್ಯದ ದರ ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸದ್ಯಕ್ಕೆ ಮದ್ಯದ ದರ ಏರಿಕೆಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಹೇಳಲಾಗುತ್ತಿದೆ