ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ.
ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.