ಬೆಂಗಳೂರು: ಶಬರಿಮಲೆಗೆ ತೆರಳುವಂತೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ನೀಲಕ್ಕರ್ ನಡುವೆ ಕೆ ಎಸ್ ಆರ್ ಟಿಸಿ ವೋಲ್ವೋ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.
ಈ ಬಗ್ಗೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 29/11/2024 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ವಾಹನವನ್ನು ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.
ವೇಳಾ ಪಟ್ಟಿ ಮತ್ತು ಪ್ರಯಾಣದ ದರದ ವಿವರಗಳು
ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ನಡುವೆ ವೋಲ್ವೋ ಬಸ್ ಸಂಚಾರ
ಮಾರ್ಗ | ಪ್ರಾರಂಭಿಕ
ದಿನಾಂಕ |
ಪ್ರಯಾಣ ದರ
ವಯಸ್ಕರು ರೂ. ಪೈಸೆ |
ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡುವ
ಸಮಯ |
ನೀಲಕ್ಕಲ್ (ಪಂಪಾ-ಶಬರಿಮಲೈ) ತಲುಪುವ ಸಮಯ | ನೀಲಕ್ಕಲ್ (ಪಂಪಾ-ಶಬರಿಮಲೈ)
ಹೊರಡುವ ಸಮಯ |
ಬೆಂಗಳೂರು ತಲುಪುವ ಸಮಯ |
ಬೆಂಗಳೂರು-ನೀಲಕ್ಕಲ್ (ಪಂಪಾ -ಶಬರಿಮಲೈ) | 29/11/2024 | 1750=00 | 13:50 | 06:45 | 18:00 | 10:00 |
BIG NEWS: ‘ಇ-ಸ್ವತ್ತು’ ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕೆ ‘ಕಾರ್ಯಪಡೆ ರಚನೆ’: ಸಚಿವ ಪ್ರಿಯಾಂಕ್ ಖರ್ಗೆ
BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ