ಬೆಂಗಳೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳ ನಿರುದ್ಯೋಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜ ಸಲ್ಲಿಸುವಂತಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗುತ್ತಿಗೆದಾರರೇ, ‘ಇಂಜಿನಿಯರ್’ಗಳೇ ಎಚ್ಚರ.! ‘ಅವೈಜ್ಞಾನಿಕ ರಸ್ತೆ ಕಾಮಗಾರಿ’ ನಡೆಸಿದ್ರೇ ‘ಕಾನೂನು ಕ್ರಮ ಫಿಕ್ಸ್’
ಅಶೋಕ್ ಅವರೇ ವಾಲ್ಮೀಕಿ ನಿಗಮದ ಕೇಸ್ ಬಗ್ಗೆ ಹೇಳುವುದಿದ್ದರೇ, ಕೇಳುವುದಿದ್ದರೇ SIT ಮುಂದೆ ಕೇಳಿ, ಹೇಳಿ: ಸಿಎಂ