ಬೆಂಗಳೂರು: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲಾ ಮತ್ತು ಸಹಾಯಧನ), ಜೀಜಾವುಜಲಭಾಗ್ಯ ಯೋಜನೆ (ಗಂಗಾಕಲ್ಯಾಣ ನೀರಾವರಿ ಯೋಜನೆ), ಅರಿವು ಶಿಕ್ಷಣ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಡಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಒಕ್ಕಲಿಗ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-3ಬಿ ಅಡಿಯಲ್ಲಿ 2(ಎ)ಯಿಂದ 2(ಎಫ್)ರವರೆಗೆ ಬರುವ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ರಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ) ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರಾಜ್ಯದ ‘ಯಜಮಾನಿ’ಯರಿಗೆ ಸಿಹಿಸುದ್ದಿ: ಇಂದೇ 2 ತಿಂಗಳ ‘ಗೃಹಲಕ್ಷ್ಮೀ ಯೋಜನೆ’ ಬಾಕಿ ಹಣ ಜಮಾ | Gruha Lakshmi Scheme
Good News: ಮೈಸೂರಿನಲ್ಲಿ 600 ಕೋಟಿ ರೂ ಹೂಡಿಕೆಯೊಂದಿಗೆ ಹೊಸ ಕಂಪನಿಗಳ ಸ್ಥಾಪನೆ, 5000 ಉದ್ಯೋಗ: ಪ್ರಿಯಾಂಕ್ ಖರ್ಗೆ