ಬೆಂಗಳೂರು: ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಶೇ.25ರಷ್ಟು ಶಿಷ್ಯವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ಪರಿಷ್ಕರಣೆ
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರುಗಳ ಶಿಷ್ಯವೇತನ (ಸ್ಟಿಪೆಂಡ್)ವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆನೀಡಿದ್ದರು. ಪರಿಷ್ಕೃತ ವೇತನವ ಆಗಸ್ಟ್ 1ರಿಂದಲೇ ಜಾರಿಗೆ ಬಂದಿದ್ದು, ಶೇ.25ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಶಿಷ್ಯವೇತನ ಹೆಚ್ಚಳ ಮಾಡಿದಬೆನ್ನಲ್ಲೇ ವೈದ್ಯರು ಮುಷ್ಕರನ್ನು ಹಿಂಪಡೆದಿದ್ದಾರೆ.
ಪರಿಷ್ಕೃತ ವೇತನ:
ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು:
ಕೋರ್ಸ್‍ಗಳು – ಮಾಸಿಕ ವೇತನ
1ನೇ ವರ್ಷ – ರೂ. 45,000 ದಿಂದ 56,250
2ನೇ ವರ್ಷ- ರೂ. 50,000 ದಿಂದ 62,500
3ನೇ ವರ್ಷ- ರೂ. 55,000 ದಿಂದ 68,750
ಸೂಪರ್ ಸ್ಪೆಷಾಲಿಟಿ ವೈದ್ಯ ವಿದ್ಯಾರ್ಥಿಗಳು:
ಕೋರ್ಸ್‍ಗಳು – ಮಾಸಿಕ ವೇತನ
1ನೇ ವರ್ಷ – ರೂ. 55,000 ದಿಂದ 68,750
2ನೇ ವರ್ಷ- ರೂ. 60,000 ದಿಂದ 75,000
3ನೇ ವರ್ಷ- ರೂ. 65,000 ದಿಂದ 81,250
ಸೀನಿಯರ್ ರೆಸಿಡೆಂಟ್ಸ್ – ರೂ. 60,000 ದಿಂದ 75,000
ಮಂಜೂರಾದ ಸೀಟುಗಳು
ಸ್ನಾತಕೋತ್ತರ 3,540
ಸೂಪರ್ ಸ್ಪೆಷಾಲಿಟಿ 445
ಸೀನಿಯರ್ ರೆಸಿಡೆಂಟ್ 527
ಒಟ್ಟು 4,312 ಸೀಟುಗಳು
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.#ಶಿಷ್ಯವೇತನ@CMofKarnataka… pic.twitter.com/QpAbpWNxxc
— DIPR Karnataka (@KarnatakaVarthe) August 24, 2024