ನವದೆಹಲಿ: ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ಶೈಕ್ಷಣಿಕ ವರ್ಷದಿಂದ ದೇಶದಲ್ಲಿ ವೈದ್ಯಕೀಯ ಕೋರ್ಸ್ಗಳ 8000 ಸೀಟುಗಳು ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜುಗಳ ಮೌಲ್ಯಮಾಪನ ನಡೆಯುತ್ತಿದೆ. ನೀಟ್-ಯುಜಿ ಕೌನ್ಸೆಲಿಂಗ್ ಆರಂಭವಾಗಿದೆ ಮತ್ತು ಮೊದಲ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡಿದೆ. ಆಗಸ್ಟ್ 25 ರೊಳಗೆ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಾರಂಭವಾಗುವ ನಿರೀಕ್ಷೆಯಿದೆ.
ಈ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಳ ಮಾಡಲಾಗುವುದು. 8000 ಸೀಟುಗಳ ಹೆಚ್ಚಳ ಸಂಬಂಧ ವೈದ್ಯಕೀಯ ಕಾಲೇಜುಗಳ ಮೌಲ್ಯಮಾಪನ ನಡೆಯುತ್ತಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥ ಡಾ. ಅಭಿಜಿತ್ ಶೇರ್ ತಿಳಿಸಿದ್ದಾರೆ.
ಈ ವರ್ಷದ ಜುಲೈನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ಎನ್ಎಂಸಿ, ಮಧ್ಯವರ್ತಿಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳ ಜಾಲವನ್ನು ಸಿಬಿಐ ಭೇದಿಸಿದ ನಂತರ, ಈ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ ಕಡಿಮೆಯಾಗುವ ಭೀತಿ ಇತ್ತು.
ನೀಟ್-ಯುಜಿಗೆ ಈಗಾಗಲೇ ಕೌನ್ಸಿಲಿಂಗ್ ನಡೆಯುತ್ತಿದ್ದು, ಮೊದಲ ಸುತ್ತು ಪೂರ್ಣಗೊಂಡಿದೆ. ಆಗಸ್ಟ್ 25 ರಂದು ಎರಡನೇ ಸುತ್ತಿನ ಕೌನ್ಸಿಲಿಂಗ್ ಆರಂಭವಾಗುವ ನಿರೀಕ್ಷೆ ಇದೆ. ಈ ವರ್ಷದ ಜುಲೈನಲ್ಲಿ ಭ್ರಷ್ಟಾಚಾರ ಮತ್ತು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಗ್ಯ ಸಚಿವಾಲಯ, ರಾಷ್ಟ್ರೀಯ ವೈದ್ಯಕೀಯ ಆಯೋಗದ ಕೆಲವು ಅಧಿಕಾರಿಗಳು, ಮಧ್ಯವರ್ತಿಗಳನ್ನು ಸಿಬಿಐ ಬಂಧಿಸಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ ಕಡಿಮೆಯಾಗುವ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಪ್ರಸ್ತುತ ಸರ್ಕಾರಿ ವಿಭಾಗದಲ್ಲಿ 59,782 ಮತ್ತು ಖಾಸಗಿ ವಿಭಾಗದಲ್ಲಿ 58,316 ಸೀಟುಗಳು ಸೇರಿ 1,18,098 ಯುಜಿ ಸೀಟುಗಳು ಲಭ್ಯವಿದ್ದರೆ, ಸ್ನಾತಕೋತ್ತರ ವಿಭಾಗದಲ್ಲಿ 53,960 ಸೀಟುಗಳು ಲಭ್ಯವಾಗಲಿವೆ. ಇದರೊಂದಿಗೆ ಇನ್ನೂ 8000 ಸೀಟು ಸೇರ್ಪಡೆ ಆಗಲಿವೆ.