ಬೆಂಗಳೂರು: ರಾಜ್ಯದ ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಸಿಯೂಟ ನಿವೃತ್ತ ನೌಕರರಿಗೆ ಇಡುಗಂಟು ನೀಡುವುದಾಗಿ ಭರವಸೆ ನೀಡಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮಹಿಳಾ ನೌಕರರು ತಮಗೆ ನಿವೃತ್ತಿ ಬಳಿಕ ಇಡುಗಂಟು ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಇಡುಗಂಟು ನೀಡುವ ಕುರಿತು ಭರವಸೆ ನೀಡಿದೆ.
ನಿವೃತ್ತಿ ಹೊಂದಿದ ಹಾಗೂ ನಿವೃತ್ತಿ ಹೊಂದುತ್ತಿರುವ ಬಿಸಿಯೂಟ ನೌಕರರಿಗೆ ತಲಾ 1 ಲಕ್ಷ ರೂ. ಮೊತ್ತದ ಇಡುಗಂಟು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಸದಸ್ಯರು ಸ್ವಾತಂತ್ತ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದರು.