ಬೆಂಗಳೂರು: ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು 1000 ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು.