ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇ, ವಿಐಎ, ಸಿಇಟಿ/ ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಕ್ರಿಕಲ್ಚರ್ ಸೈನ್ಸ್, ವೆಟರಿನರಿ, ಫಾರ್ಮಾ ಸೈನ್ಸ್, ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್‍ನಲ್ಲಿ ನಿಗಮದ ಜಾಲತಾಣ http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿ ಪ್ರಿಂಟ್ ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಅಂಕಪಟ್ಟಿ, ಆಧಾರ್ ಕಾರ್ಡ್, ಪೋಷಕರು ಮತ್ತು ಅರ್ಜಿದಾರರ ಫೆÇೀಟೋ-05, ಸಿಇಟಿ ಹಾಲ್ ಟಿಕೆಟ್ ಪ್ರತಿ ಮತ್ತು ನೋಟರಿ ಮಾಡಿಸಿದ ಛಾಪಾ ಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತಿ(ನಿ) ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ ಎಫ್ ಎಫ್- 29/37, 1ನೇ ಮಹಡಿ, ಹಮೀದ್ μÁ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೆÇಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 080-22114815ಗೆ ಮತ್ತು ಹೆಲ್ಪ್‍ಲೈನ್ ಸಂಖ್ಯೆ: 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.