ರಾಮನಗರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದವರಿಗೆ ವಿವಿಧ ಯೋಜನೆಗಳಡಿ ನಿಗಮದಿಂದ ಸಾಲ ಹಾಗೂ ಸೌಲಭ್ಯಗಳನ್ನು ನೀಡಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ ಹಾಗೂ ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ. 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕೊಠಡಿ ಸಂಖ್ಯೆ 404, 3ನೇ ಮಹಡಿ, ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ, ರಾಮನಗರ. ದೂ.ಸಂಖ್ಯೆ: 080-27271029. ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವAತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—