ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿAದ ಆನ್-ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಆಸಕ್ತರು ಆ.31 ರೊಳಗಾಗಿ ಆನ್‌ಲೈನ್ ವೆಬ್‌ಸೈಟ್ https://kmdconline.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
*ಯೋಜನೆಗಳ ವಿವರ:*
*ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ:*
ಅಲ್ಪಸಂಖ್ಯಾತರ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಭಿಯನ್ನಾಗಿ ಮಾಡುವ ಸಲುವಾಗಿ ರಾಷ್ಟಿçÃಕೃತ, ಶೆಡ್ಯೂಲ್ ಬ್ಯಾಂಕ್, ಆರ್‌ಬಿಐನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿAದ ಪಡೆಯುವ ಸಾಲಕ್ಕೆ ಘಟಕವೆಚ್ಚದ ಶೇ.50 ಅಥವಾ ಗರಿಷ್ಠ ರೂ.2 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವ-ಸಹಾಯ ಸಂಘಗಳ ಆರ್ಥಿಕ ಬ್ಯಾಂಕ್ ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು.
*ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ:*
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಪ್ರೋತ್ಸಾಹಿಸಿ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವಸಲುವಾಗಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅಗತ್ಯವಿರುವ ದುಡಿಮೆ ಬಂಡವಾಳ ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ ರೂ.2 ಲಕ್ಷದವರೆಗೆ ಸಾಲ ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಶೇ. 50 ಸಹಾಯಧನವಾಗಿರುತ್ತದೆ.
ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ:*
ಸಿಖ್ಖಧರ್ಮದಲ್ಲಿರುವ ಸಿಖ್ಖಲಿಗಾರ ಸಮುದಾಯದ ಜನರಿಗೆ ಐರನ್‌ವೇರ್, ವೆಲ್ಡಿಂಗ್, ಫ್ಯಾಬ್ರಿಕೇಷನ್ಸ್ ಕೂಲಿ ಕೆಲಸವನ್ನು ನಿರ್ವಹಿಸುತ್ತಿದ್ದು, ವಾರ್ಷಿಕ ಆದಾಯವು ರೂ.50 ಸಾವಿರದಿಂದ ರೂ.1 ಲಕ್ಷಗಳಾಗಿರುತ್ತದೆ. ಸಿಖ್ಖಲಿಗಾರ ಸಮುದಾಯದ ಜನರನ್ನು ಆರ್ಥಿಕ ಸ್ವಾವಲಂಬಿಗಳಾಗಿ ಮಾಡುವ ಉದ್ದೇಶದಿಂದ ನಿಗಮದಿಂದ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗತ್ತಿಕೊಳ್ಳಲು ರೂ.50 ಸಾವಿರ ಸಾಲ ಮತ್ತು ರೂ.50 ಸಾವಿರ ಸಹಾಯಧನವನ್ನು ಮತ್ತು ಗೂಡ್ಸ್ ಟೆಂಪೂ, ವಾಹನ ಖರೀದಿಸಲು ವಾಹನ ಮೊತ್ತದ ಶೇ.33 ಗರಿಷ್ಠ ರೂ.1.50 ಲಕ್ಷ ಸಹಾಯಧನ ಒದಗಿಸಲಾಗುವುದು. ಒಂದು ವೇಳೆ ಸ್ವಯಂ ಉದ್ಯೋಗಕ್ಕೆ ಬ್ಯಾಂಕ್, ಆರ್ಥಿಕ ಸಂಸ್ಥೆಗಳಿAದ ಸಾಲ ಪಡೆಯುವುದಾದಲ್ಲಿ ನಿಗಮದಿಂದ ಶೇ.33 ಗರಿಷ್ಠ ರೂ.1 ಲಕ್ಷ ಸಹಾಯಧನ ಒದಗಿಸಲಾಗುವುದು.
*ಅರ್ಹತೆಗಳು:*
ಅರ್ಜಿದಾರರು ಕನಿಷ್ಠ 15 ವರ್ಷದಿಂದ ಜಿಲ್ಲೆಯ ಖಾಯಂ ನಿವಾಸಿಯಾಗಿದ್ದು, ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ಆರು ಲಕ್ಷ ಮೀರಿರಬಾರದು.
ಅರ್ಜಿದಾರರು ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷಗಳಾಗಿದ್ದು, ಸ್ವ-ಸಹಾಯ ಸಂಘವು ಕಡ್ಡಾಯವಾಗಿ ಉಪನೋಂದಣಿ ಅಧಿಕಾರಿಯವರಿಂದ ನೋಂದಣಿಯಾಗಿರಬೇಕು.
ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರ ಹಾಗೂ ಕಡ್ಡಾಯವಾಗಿ ಐಎಫ್‌ಎಸ್‌ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.
ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್‌ನ ವಿಜಯ ನಗರ ಕಾಲೋನಿಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ