ಬೆಂಗಳೂರು: ರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪೆÇ್ರೀತ್ಸಾಹ ಯೋಜನೆ, ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆ ಹಾಗೂ ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ https:// kmdconline.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.