ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಇನ್ನೂ ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು,. ಗುತ್ತಿಗೆಯಲ್ಲಿ ಎರಡು ಕೋಟಿಯ ತನಕ ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ.
ಇನ್ನೂ ಸಿನಿಮಾ ನೋಡೋರಿಗೆ ಗುಡ್‌ನ್ಯೂಸ್ ನೀಡಿದ್ದು ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಪಡಿಸಿದೆ ಪ್ರತಿ ಟಿಕೇಟ್‌ಗೆ ಇನ್ನೂರು ರೂಗಳನ್ನು ನಿಗದಿ ಪಡಿಸಿದೆ.
ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಮತ್ತು ಮತ್ತು ಬಾಳೆ ಹಣ್ಣನ್ನು ವಾರದ ಆರು ದಿನವೂ ಕೂಡ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕೆ ಬರೋಬ್ಬರಿ 1500 ಕೋಟಿ ಹಣವನ್ನು ಮೀಸಲು ಇಡಲಾಗಿದೆ ಅಂತ ತಿಳಿಸಿದರು.