ದಾವಣಗೆರೆ : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಅಲ್ಪಸಂಖ್ಯಾತರ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳಲ್ಲಿ ಮತ್ತು ಜಿಲ್ಲಾ ಕಚೇರಿಯಲ್ಲಿ ಜುಲೈ 14 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಡಾ.ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆ, ಕೊಂಡಜ್ಜಿ, ಹರಿಹರ ತಾ|| ದಾವಣಗೆರೆ ಜಿಲ್ಲೆ ದೂ.ಸಂ: 9008815296, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ವಡೆರಹಳ್ಳಿ, 9916828601, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ ದೂ.ಸಂ: 9164855466, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಜಗಳೂರು ತಾ|| ದೂ.ಸಂ: 8197641112
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧಿಕಾರಿ ತಿಳಿಸಿದ್ದಾರೆ.