ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.07 ರ ವರೆಗೆ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.ಹೆಲ್ಪ್ ಡೆಸ್ಕ್ ನಂ:8277799990 (24*7) ಸಹಾಯವಾಣಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಾಂತ್ರಿಕ ತೊಂದರೆಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.